Board Exam Time Table: ಕರ್ನಾಟಕ ಬೋರ್ಡ್ ಪರೀಕ್ಷೆ ಟೈಮ್ ಟೇಬಲ್ ಬಿಡುಗಡೆ.! ಯಾವ ಪರೀಕ್ಷೆ ಯಾವಾಗ ನಡೆಯಲಿದೆ ನೋಡಿ!
Board Exam Time Table: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ಬೋರ್ಡ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಅನ್ನು ನೀಡಿದೆ. ಕರ್ನಾಟಕ ಪರೀಕ್ಷಾ ಹಾಗೂ ಮೌಲ್ಯನಿರ್ಣಯ ಮಂಡಳಿಯಿಂದ 10ನೇ ತರಗತಿ ಹಾಗೂ 12ನೇ ತರಗತಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಯಾವ ದಿನಾಂಕಕ್ಕೆ ಪರೀಕ್ಷೆ ಪ್ರಾರಂಭವಾಗಲಿವೆ? ಮತ್ತು ಪರೀಕ್ಷೆಯಲ್ಲಿ ಏನೆಲ್ಲ ಬದಲಾವಣೆ ಆಗಿದೆ? ಎಂಬುದರ ಸಂಪೂರ್ಣ ವಿವರ ಈ ಕೆಳಗಡೆ ಕೊಡಲಾಗಿದೆ ಓದಿ.
ಹೌದು ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು 10ನೇ ತರಗತಿ ಹಾಗೂ 12ನೇ ತರಗತಿ ವಿದ್ಯಾರ್ಥಿಗಳ ಬೋರ್ಡ್ ಪರೀಕ್ಷೆ ಪ್ರಾರಂಭ ದಿನಾಂಕವನ್ನು ತಿಳಿಸಿದ್ದಾರೆ. ಪರೀಕ್ಷೆ ಪ್ರಾರಂಭ ದಿನಾಂಕ ಈ ಕೆಳಗೆ ಇದೆ.
ಕರ್ನಾಟಕ ಬೋರ್ಡ್ ಪರೀಕ್ಷೆ ಪ್ರಾರಂಭ ದಿನಾಂಕ:
ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಹಾಗೂ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು ತಿಳಿಸಿರುವ ಮಾಹಿತಿ ಪ್ರಕಾರ ಬೋರ್ಡ್ ಪರೀಕ್ಷೆ ಫೆಬ್ರವರಿ 24ನೇ ತಾರೀಖಿಗೆ ಪ್ರಾರಂಭಗೊಂಡು, ಮಾರ್ಚ್ 12ನೇ ತಾರೀಖಿನವರೆಗೆ ನಡೆಯಲಿವೆ ಎಂದು ಪ್ರಕಟಿಸಿದ್ದಾರೆ. ಅಂದರೆ ವಿದ್ಯಾರ್ಥಿಗಳ ಪರೀಕ್ಷೆ ಒಟ್ಟು 17 ದಿನದ ವರೆಗೆ ನಡೆಯಲಿವೆ ಎಂದು ಹೇಳಿದ್ದಾರೆ.
ರಾಜ್ಯದ ವಿದ್ಯಾರ್ಥಿಗಳು ತಮ್ಮ ವಿಷಯದ ಪರೀಕ್ಷೆಗಳು ಯಾವ ಯಾವ ದಿನಾಂಕದೊಳಗೆ ನಡೆಯಲಿರುವ ಎಂಬುದರ ಮಾಹಿತಿ ತಿಳಿಯಲು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ತಿಳಿದುಕೊಳ್ಳಬಹುದು.
ಕರ್ನಾಟಕ ಬೋರ್ಡ್ ಪರೀಕ್ಷೆಯಲ್ಲಿ ಏನೆಲ್ಲ ಬದಲಾವಣೆ:
ಕರ್ನಾಟಕ ಬೋರ್ಡ್ ಪರೀಕ್ಷೆಯಲ್ಲಿ ನಕಲು ಮಾಹಿತಿಯನ್ನು ತಡೆಯಲು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಬಳಸಲಾಗಿದೆ. ಈ ಬಾರಿ ಕರ್ನಾಟಕ ಬೋರ್ಡ್ ಪರೀಕ್ಷೆ ವಂಚನೆ ತಡೆಯಲು ಕಟ್ಟು ನಿಟ್ಟಾದ ಕಡಿವಾಣ ಹಾಕಲಾಗಿದೆ, ಮತ್ತು ಕೊಠಡಿಗಳಲ್ಲಿ ಸೀಕ್ರೆಟ್ ಕ್ಯಾಮರಾ ಗಳನ್ನು ಅಳವಡಿಸುವುದು, ರಾಜ್ಯಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ರಚಿಸಲಾಗುತ್ತದೆ.
ರಾಜ್ಯದ ಪರೀಕ್ಷೆ ಕೇಂದ್ರಗಳಲ್ಲಿ ಭದ್ರತೆ ಹಾಗೂ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಕೆಗೆ ಸರ್ಕಾರ 25 ಕೋಟಿಯನ್ನು ಮೀಸಲಿಡಲಾಗಿದೆ ಎಂದು ಮಾಹಿತಿ ತಿಳಿದಿದೆ. ಹಾಗೂ ಪರೀಕ್ಷೆ ಬರೆಯುವ ಸಮಯವನ್ನು ಕಡಿತಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಹೇಳಿದೆ. ಎಲ್ಲ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮತ್ತು ಈಗಿನಿಂದಲೇ ತಮ್ಮ ಪರಿಶ್ರಮ ಮತ್ತು ಶಾಂತಿತೆಯಿಂದ ಪರೀಕ್ಷೆಗೆ ತಯಾರಿ ನಡೆಸಬೇಕು.