Anganwadi Recruitment: ಎಲ್ಲಾ ಸಮಸ್ತ ಕರ್ನಾಟಕ ಜನತೆಗೆ ನಮಸ್ಕಾರ! ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಹುದ್ದೆಗಳಿಗೆ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಹುದ್ದೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದ ಕೆಳಗೆ, ಸಂಬಳದ ವಿವರಣೆ, ಶೈಕ್ಷಣಿಕ ಅರ್ಹತೆ, ಅರ್ಜಿ ಶುಲ್ಕ, ಈ ಕೆಲಸದ ಪ್ರಮುಖ ದಿನಾಂಕಗಳು ಮತ್ತು ಇತರ ಮಾಹಿತಿಯೊಂದಿಗೆ ಈ ಕೆಲಸಕ್ಕೆ ಹೇಗೆ ಆಯ್ಕೆಯಾಗುವುದು ಮತ್ತು ಅರ್ಜಿ ಪ್ರಕ್ರಿಯೆ ಹೇಗೆ ಎಂಬುದರ ಕುರಿತು ಮಾಹಿತಿಯನ್ನು ನೀವು ಕಾಣಬಹುದು. ಆದ್ದರಿಂದ ಲೇಖನವನ್ನು ಸಂಪೂರ್ಣವಾಗಿ ಓದಿ.
ಇಲಾಖೆಯ ಹೆಸರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ.
ಹುದ್ದೆಗಳ ಸಂಖ್ಯೆ: ಒಟ್ಟು 1,476 ಹುದ್ದೆಗಳು.
ಹುದ್ದೆಗಳ ಹೆಸರು: ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕರು.
ಅರ್ಜಿ ಪ್ರಕ್ರಿಯೆ: ಆನ್ಲೈನ್ (Online)
ಹುದ್ದೆಗಳ ವಿವರ:
ಅಂಗನವಾಡಿ ಕಾರ್ಯಕರ್ತೆಯರು ಹುದ್ದೆಗಳ ಜಿಲ್ಲಾವಾರು ಖಾಲಿ ಇರುವ ಸಂಖ್ಯೆ: ಮಂಡ್ಯ 73, ದಕ್ಷಿಣ ಕನ್ನಡ 73, ರಾಯಚೂರು 80, ರಾಮನಗರ 125, ಉಡುಪಿ 57.
ಅಂಗನವಾಡಿ ಸಹಾಯಕಿಯರು ಹುದ್ದೆಗಳ ಜಿಲ್ಲಾವಾರು ಖಾಲಿ ಇರುವ ಸಂಖ್ಯೆ: ಮಂಡ್ಯ 262, ದಕ್ಷಿಣ ಕನ್ನಡ 268, ರಾಯಚೂರು 136, ರಾಮನಗರ 266, ಉಡುಪಿ 136.
ಸಂಬಳದ ವಿವರ: ಆಯ್ಕೆಯಾದ ಅಭ್ಯರ್ಥಿಗಳಿಗೆ ಅಂಗನವಾಡಿ ನೇಮಕಾತಿ ಅಧಿಸೂಚನೆ ನಿಯಮದ ಪ್ರಕಾರ ಸಂಬಳವನ್ನೂ ನೀಡಲಾಗುತ್ತದೆ.
ವಯಸ್ಸಿನ ಮಿತಿಯ ವಿವರ: ಈ ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕರು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳು ಕನಿಷ್ಠ 19 ವರ್ಷದವರಾಗಿರಬೇಕು ಮತ್ತು ಗರಿಷ್ಠ 35 ವರ್ಷಗಾಳನ್ನು ಮೀರಬಾರದು.
ಅರ್ಜಿ ಶುಲ್ಕ: ಈ ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕ ಇರುವುದಿಲ್ಲ.
ಶೈಕ್ಷಣಿಕ ಅರ್ಹತೆ:
- ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ (2nd PUC) ಯನ್ನು ಪೂರ್ಣಗೊಳಿಸಿರಬೇಕು.
- ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ (10th) ಅನ್ನು ಪೂರ್ಣಗೊಳಿಸಿರಬೇಕು.
ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅಂಗನವಾಡಿ ಕಾರ್ಯಕರ್ತರು ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಕೊನೆಯ ದಿನಾಂಕವು: 29/09/2024
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವ ಲಿಂಕ್: https://karnemakaone.kar.nic.in/abcd/home.aspx