Free Borewell Scheme- ಉಚಿತ ಬೋರ್ ವೆಲ್ ಯೋಜನೆಗೆ ಅರ್ಜಿ ಆಹ್ವಾನ! ರೈತರು ಈಗಲೇ ಅರ್ಜಿ ಸಲ್ಲಿಸಿ!
ನಮಸ್ಕಾರ ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ಅಂತ ವಿಶೇಷವಾಗಿ ಬೋರ್ವೆಲ್ ಅಥವಾ ತೆರೆದ ಬಾವಿಯನ್ನು ಕರೆಸಿಕೊಳ್ಳಲು ಸರ್ಕಾರದಿಂದ ಸಹಾಯಧನವನ್ನು ನೀಡುತ್ತದೆ. ಈ ಯೋಜನೆಯ ಲಾಭ ಪಡೆಯಬೇಕಾದರೆ ನೀವು ಪೂರ್ತಿ ಮಾಹಿತಿಯನ್ನು ತಿಳಿದುಕೊಳ್ಳಬೇಕು. ಈ ಕೆಳಗಡೆ ಉಚಿತ ಬೋರ್ವೆಲ್ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಮೇ 2ಕ್ಕೆ SSLC ಫಲಿತಾಂಶ! SSLC Result Date Karnataka
ರೈತರು ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತವಾಗಿ ಬೋರ್ವೆಲ್ ಅನ್ನು ಕೊರೆಸಿಕೊಳ್ಳಲು ಸರ್ಕಾರದ ಕಡೆಯಿಂದ ಹಣವನ್ನು ಪಡೆಯಬಹುದಾಗಿದೆ. ರೈತರು ತಮ್ಮ ಆಸ್ತಿಯಲ್ಲಿ ನೀರಾವರಿ ಸೌಕರ್ಯವನ್ನು ಪಡೆಯಬೇಕೆಂಬ ನಿಟ್ಟಿನಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಗಂಗಾ ಕಲ್ಯಾಣ ಯೋಜನೆ (Free Borewell Scheme)
ಗಂಗಾ ಕಲ್ಯಾಣ ಯೋಜನೆಯ ಅಡಿಯಲ್ಲಿ ಉಚಿತವಾಗಿ ಬೋರ್ವೆಲ್ ಕೊರೆಸಿಕೊಳ್ಳಲು ಸರ್ಕಾರದಿಂದ ಸಹಾಯಧನವನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಆಸಕ್ತಿ ಇರುವಂತಹ ರೈತರು ತಮ್ಮ ಅಸ್ತಿಯಲ್ಲಿ ಬೋರ್ವೆಲ್ ಕೊರೆಸಿಕೊಳ್ಳಲು ಸಹಾಯಧನವನ್ನು ಪಡೆಯಬಹುದಾಗಿರುತ್ತದೆ.
ಆಟೋ ಮತ್ತು ಟ್ಯಾಕ್ಸಿ ಖರೀದಿಗೆ ಈಗ ಸರ್ಕಾರದಿಂದ ಸಬ್ಸಿಡಿ!
ಈ ಯೋಜನೆಗೆ ಅರ್ಜಿ ಸಲ್ಲಿಸಲು ರೈತರಿಗೆ ಪ್ರತಿ ವರ್ಷವೂ ಕೂಡ ಅವಕಾಶವನ್ನು ನೀಡಲಾಗುತ್ತದೆ. ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕಾಗುತ್ತದೆ. ಅಲ್ಲಿ ಕೇಳಲಾಗುವಂತಹ ಪೂರ್ತಿ ಅರ್ಹತಾ ವಿವರಗಳು ಮತ್ತು ಇನ್ನಷ್ಟು ಹೆಚ್ಚಿನ ವಿವರಗಳನ್ನು ಓದುವ ಮೂಲಕ ಅರ್ಜಿ ಸಲ್ಲಿಸಬಹುದು.
Free Borewell Scheme-ಅರ್ಜಿ ಸಲ್ಲಿಸಲು ಅರ್ಹತೆಗಳು
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಯು 18 ರಿಂದ 55 ವರ್ಷದ ವ್ಯಕ್ತಿಯಾಗಿರಬೇಕು.
- 1.20 ಯಿಂದ 5 ಎಕರೆ ಭೂಮಿಯನ್ನು ಹೊಂದಿರುವಂತಹ ಯಾವ ರೈತರು ಬೇಕಾದರೂ ಕೂಡ ಅರ್ಜಿ ಸಲ್ಲಿಸಬಹುದು.
- ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಾತ್ರ ಉಚಿತ ಬೋರ್ವೆಲ್ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಹತೆ ನೀಡಲಾಗಿದೆ.
- ಅರ್ಜಿದಾರರ ಕುಟುಂಬದಲ್ಲಿ ಯಾರೂ ಕೂಡ ಸರ್ಕಾರಿ ನೌಕರಿಯಲ್ಲಿ ಇರಬಾರದು.
- ಎಲ್ಲ ಮೂಲಗಳಿಂದ ಕುಟುಂಬದ ವಾರ್ಷಿಕ ಆದಾಯವು 6,00,000 ಮೀರಿರಬಾರದು.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
- ಆದಾಯ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆಧಾರ್ ಕಾರ್ಡ್
- ಭೂಮಿಯ ಪಹಣಿ (RTC)
- ಸಣ್ಣ/ಅತಿ ಸಣ್ಣ ಹಿಡುವಳಿದಾರರ ಪ್ರಮಾಣ ಪತ್ರ
- ಬ್ಯಾಂಕ್ ಪಾಸ್ ಬುಕ್ ವಿವರಗಳು
- ಸ್ವಯಂ ಘೋಷಣೆಯ ಪತ್ರ
- ಭೂ-ಕಂದಾಯ ಪಾವತಿಸಿರುವಂತಹ ರಸೀದಿ
Free Borewell Scheme- ಅರ್ಜಿ ಸಲ್ಲಿಸುವುದು ಹೇಗೆ.?
ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಲಿಂಕ್ ಈ ಕೆಳಗಡೆ ನೀಡಲಾಗಿದೆ ನೋಡಿ. ಅರ್ಜಿ ಸಲ್ಲಿಸಲು ಉಪಯುಕ್ತ ವಾಗುವಂತಹ ಡೈರೆಕ್ಟ ಸೇವಾ ಸಿಂಧು ಪೋರ್ಟಲ್ ಲಿಂಕ್ ಅನ್ನು ಈ ಕೆಳಗಡೆ ನೀಡಲಾಗಿದೆ ನೋಡಿ.
ಅರ್ಜಿ ಲಿಂಕ್ – https://sevasindhu.karnataka.gov.in/
ಮೇಲೆ ನೀಡಿರುವಂತಹ ಸೇವಾ ಸಿಂಧು ಅಧಿಕೃತ ಜಾಲತಾಣವನ್ನು ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರವಿರುವಂತಹ ಗ್ರಾಮಒನ್ ನಂತಹ ಆನ್ಲೈನ್ ಸೇವ ಕೇಂದ್ರಗಳಿಗೆ ಭೇಟಿ ನೀಡಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಮೇಲೆ ಕೇಳಲಾಗಿರುವಂತಹ ಅರ್ಹತೆಗಳು ಮತ್ತು ಒದಗಿಸಬೇಕಾಗಿರುವ ದಾಖಲೆಗಳು ನೀಡುವುದು ನಿಮ್ಮ ಜವಾಬ್ದಾರಿ ಆಗಿರುತ್ತದೆ.