Gruhalakshmi Scheme: ಗೃಹಲಕ್ಷ್ಮಿ ಯೋಜನೆ ₹2000 ಹಣ ಇನ್ಮುಂದೆ ಬರಲ್ಲ.! ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ!

Gruhalakshmi Scheme: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದುಗೊಳಿಸುವ ಸುದ್ದಿ ಸಾಕಾಷ್ಟು ಶಾಕಿಂಗ್ ನ್ಯೂಸ್ ನೀಡಿದೆ. ಮತ್ತು ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ರೇಷನ್ ಕಾರ್ಡಗೆ ಸೇರಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದರ ನಡುವೆ ವಿರೋಧ ಪಕ್ಷದ ನಾಯಕರು ನೀವು ಹೇಗೆ ಬಿಪಿಎಲ್ ರೇಷನ್ ಕಾರ್ಡ್ ರದ್ದುಗೊಳಿಸಿದ್ದೀರಿ ಹಾಗೆ ಗೃಹಲಕ್ಷ್ಮಿ ಯೋಜನೆ ಸಹ ರದ್ದುಗೊಳಿಸಿ ಎಂದು ಪ್ರಶ್ನಿಸುತ್ತಿದ್ದಾರೆ. ಇದರಿಂದಾಗಿ ಸಾಕಷ್ಟು ಮಹಿಳೆಯರಿಗೆ ಆತಂಕ ಶುರುವಾಗಿದ್ದು, ಈ ಒಂದು ಮಾಹಿತಿ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆಯನ್ನು ನೀಡಿದ್ದಾರೆ ಇದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ ಓದಿ.

ಹೌದು ಕರ್ನಾಟಕದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದುಗೊಳಿಸುವಿಕೆ ಮಾಹಿತಿ ತಾಕಷ್ಟು ಜನರಲ್ಲಿ ಕಹಿ ಸುದ್ದಿಯನ್ನು ನೀಡಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ 22 ಲಕ್ಷಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ರದ್ದುಗೊಳಿಸಲಾಗಿದೆ. ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ರೇಷನ್ ಕಾರ್ಡಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಡೆ ಇರುವ ವ್ಯಕ್ತಿಗಳಿಗೆ ಮಾತ್ರ ಬಿಪಿಎಲ್ ರೇಷನ್ ಕಾರ್ಡ್ ಸೀಮಿತವಾಗಿದ್ದು, ಈ ಬಿಪಿಎಲ್ ರೇಷನ್ ಕಾರ್ಡ್ ಅನ್ನು ಬಡತನ ರೇಖೆಗಿಂತ ಮೇಲ್ಗಡೆ ಇರುವ ಜನರು ನಕಲಿ ದಾಖಲೆಗಳನ್ನು ನೀಡಿ ಪಡೆದುಕೊಂಡಿದ್ದಾರೆ, ಅಂತ ಜನರನ್ನು ಪತ್ತೆ ಹಚ್ಚಿ ರೇಷನ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ರೇಷನ್ ಕಾರ್ಡಗೆ ವರ್ಗಾವಣೆ ಮಾಡಲಾಗುತ್ತಿದೆ. ಅದೇ ರೀತಿಯಾಗಿ ಕಾರ್ಡುಗಳನ್ನು ರದ್ದುಗೊಳಿಸುವ ಮೂಲಕ ಗೃಹಲಕ್ಷ್ಮಿ ಯೋಜನೆ ಹಣ ರದ್ದಾಗುತ್ತಿದೆ ಎಂದು ಮಹಿಳೆಯರಲ್ಲಿ ಗೃಹಲಕ್ಷ್ಮಿ 2000 ಬರಲ್ಲ ಎಂಬ ಸಾಕಷ್ಟು ಆತಂಕ ಉಂಟಾಗಿದೆ.

ಯಾಕೆಂದ್ರೆ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲು ಮತ್ತು ಹಣ ಪಡೆಯಲು ಮುಖ್ಯವಾಗಿ ರೇಷನ್ ಕಾರ್ಡ್ ಒಂದು ದಾಖಲೆ ಆಗಿದೆ ಈ ಕಾರ್ಡ್ ಹೊಂದಿದವರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆ 2000 ಅರ್ಹತೆ ಹೊಂದಿರುತ್ತಾರೆ. ಸಾಕಷ್ಟು ಮಹಿಳೆಯರು ಈ ಹಣ ಸಹ ತೊರೆದು ಹೋಗುತ್ತದೆ ಎಂಬ ಸಂಕಷ್ಟಕ್ಕೆ ಈಡಾಗಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ:

ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ರದ್ದುಗೊಳಿಸುವ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪ್ರಶ್ನಿಸಿದಾಗ, ರಾಜ್ಯದಲ್ಲಿ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ರೇಷನ್ ಕಾರ್ಡಗೆ ವರ್ಗಾವಣೆ ಮಾಡಲಾಗುತ್ತಿದೆ, ಗೃಹಲಕ್ಷ್ಮಿ ಯೋಜನೆ ಹಣ ಯಾವುದೇ ಕಾರಣಕ್ಕೂ ನಿಲ್ಲಲ್ಲ, ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಗೆ ವರ್ಗಾವಣೆ ಆದರೂ ಸಹ ಗೃಹಲಕ್ಷ್ಮಿ ಯೋಜನೆ ಹಣ ಬರುತ್ತದೆ ಎಂದು ಹೇಳಿದ್ದಾರೆ. ಇದರಿಂದ ಗೃಹಲಕ್ಷ್ಮಿ ಯೋಜನೆ ಮಹಿಳೆಯರು ಗುಡ್ ನ್ಯೂಸ್ ಪಡೆದಿದ್ದಾರೆ.

Leave a Comment