PM Awas Scheme: ಸರ್ಕಾರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.! ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ ಬೇಕು!
PM Awas Yojana 2024: ನಮಸ್ಕಾರ ಎಲ್ಲ ಕರ್ನಾಟಕದ ಜನತೆಗೆ, ದೇಶದಲ್ಲಿ ಬಡತನದಿಂದ ಜೀವನ ಸಾಗಿಸುತ್ತಾ ಇರುವ ಜನರಿಗೆ ಸ್ವಂತ ಮನೆ ನಿರ್ಮಿಸುವ ಕನಸು ಕಟ್ಟಿರುತ್ತಾರೆ, ಆ ಕನಸು ನನಸು ಮಾಡಲು ಪ್ರಧಾನ ಮಂತ್ರಿ ಆವಾಸ್ ಯೋಜನೆ ಜಾರಿಗೆ ತರಲಾಗಿದೆ. ಈ ಯೋಜನೆ ಅಡಿಯಲ್ಲಿ ಸ್ವಂತ ಮನೆ ನಿರ್ಮಿಸಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ. ಹಾಗೂ ಅರ್ಜಿಯನ್ನು ಆಹ್ವಾನಿಸಲಾಗಿದೆ, ಇದರ ಸಂಪೂರ್ಣ ಮಾಹಿತಿ ಈ ಕೆಳಗಡೆ ನೀಡಲಾಗಿದೆ ಓದಿ.
ಹೌದು ಸ್ವಂತ ಮನೆ ನಿರ್ಮಿಸುವ ಕನಸನ್ನು ಹೊಂದಿರುವ ವ್ಯಕ್ತಿಗಳಿಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಸ್ವಂತ ಮನೆ ನಿರ್ಮಿಸಲು ಆರ್ಥಿಕ ಸಹಾಯಧನ ನೀಡಲು ಅರ್ಜಿಯನ್ನು ಕರೆಯಲಾಗಿದ್ದು, ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು? ಸ್ವಂತ ಮನೆ ಕಟ್ಟಲು ಎಷ್ಟರವರೆಗೆ ಸಹಾಯಧನ ಸಿಗಲಿದೆ? ಮತ್ತು ಅರ್ಜಿಯನ್ನು ಹೇಗೆ ಸಲ್ಲಿಸುವುದು? ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಿದೆ.
ಯಾರೆಲ್ಲ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು:
- ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾದರೆ ನಿಮ್ಮ ವಾರ್ಷಿಕ ಆದಾಯ 6 ಲಕ್ಷದ ಒಳಗಡೆ ಇರಬೇಕು.
- ಅರ್ಜಿ ಸಲ್ಲಿಸು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 59 ವರ್ಷ ಮೀರಬಾರದು.
- ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅಂಗವಿಕಲ ಹಾಗೂ ವಿಚ್ಛೇದನ ಪಡೆದ ಮಹಿಳೆಯರು ಮತ್ತು ವಿಧವೆ ಮಹಿಳೆಯರಿಗೆ ಮೊದಲ ಆದ್ಯತೆಯನ್ನು ನೀಡಲಾಗಿದೆ.
ಮನೆ ನಿರ್ಮಿಸಲು ಎಷ್ಟರವರಿಗೆ ಸಹಾಯಧನ ಸಿಗಲಿದೆ:
ಈ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ವಂತ ಮನೆ ನಿರ್ಮಿಸಲು ₹2,67,000 ಹೊರಗೆ ಆರ್ಥಿಕ ಸಹಾಯಧನ ನೀಡಲಾಗುತ್ತದೆ ಎಂದು ತಿಳಿಸಿದೆ ಹಾಗೂ ಇದರಲ್ಲಿ ನಗರ ಹಾಗೂ ಗ್ರಾಮೀಣ ಪಟ್ಟಿಗಳನ್ನು ಮಾಡಲಾಗಿದೆ. ಈ ಯೋಜನೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಹ ನೀಡುತ್ತದೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಮತ್ತು ಅರ್ಜಿ ಹೇಗೆ ಸಲ್ಲಿಸಬೇಕು:
- ರೇಷನ್ ಕಾರ್ಡ್
- ಆಧಾರ್ ಕಾರ್ಡ್
- ಪ್ಯಾನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
ಅರ್ಜಿ ಸಲ್ಲಿಸಲು ಆಸಕ್ತವುಳ್ಳ ಅಭ್ಯರ್ಥಿಗಳು ಈ ಮೇಲೆ ನೀಡಿರುವ ಅರ್ಹತೆಗಳು ಹಾಗೂ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೀವು ಸ್ವಂತ ಮನೆ ಕಟ್ಟಿಸಿಕೊಳ್ಳಲು ಸಹಾಯಧನ ಹಾಗೂ ಸಾಲವನ್ನು ಸಹ ಪಡೆಯಬಹುದಾಗಿದೆ.